ADVERTISEMENT

ಮಾಸ್ತಿ ಪ್ರಶಸ್ತಿ ಪ್ರಕಟ:ಜೂನ್‌ನಲ್ಲಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2012, 19:30 IST
Last Updated 5 ಏಪ್ರಿಲ್ 2012, 19:30 IST

ಬೆಂಗಳೂರು: ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಪ್ರಶಸ್ತಿ ಸಮಿತಿಯು 2012 ನೇ ಸಾಲಿನ `ಮಾಸ್ತಿ ಪ್ರಶಸ್ತಿ~ಗಾಗಿ ಹಿರಿಯ ಸಾಹಿತಿಗಳಾದ ಡಾ.ಜಿ.ಎಸ್.ಸಿದ್ಧಲಿಂಗಯ್ಯ, ಡಾ.ಸುಮತೀಂದ್ರ ನಾಡಿಗ, ಡಾ.ಎಚ್.ಎಸ್.ವೆಂಕಟೇಶ ಮೂರ್ತಿ, ಡಾ.ನಾ.ಡಿಸೋಜ ಮತ್ತು `ಪ್ರಜಾವಾಣಿ~ಯ ನಿವೃತ್ತ ಕಾರ್ಯ ನಿರ್ವಾಹಕ ಸಂಪಾದಕ ಜಿ.ಎನ್.ರಂಗನಾಥರಾವ್ ಅವರನ್ನು ಆಯ್ಕೆ ಮಾಡಿದೆ.

ಸಮಗ್ರ ಸಾಹಿತ್ಯ ಸೇವೆಗಾಗಿ ಈ ಐವರು ಸಾಧಕರನ್ನು ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದ್ದು, ಜೂನ್‌ನಲ್ಲಿ ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ತಲಾ ಇಪ್ಪತ್ತೈದು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
 
ಸಾಹಿತಿಗಳಾದ ಮಾವಿನಕೆರೆ ರಂಗನಾಥನ್, ಡಾ.ಹನೂರು ಕೃಷ್ಣಮೂರ್ತಿ, ಪ್ರೊ.ಎಲ್.ಎಸ್.ಶೇಷಗಿರಿರಾವ್ ಅವರು ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿದ್ದರು. ಸಾಹಿತ್ಯ ಹಾಗೂ ಸಾಂಸ್ಕೃತಿಕ ಲೋಕದ ಸಾಧಕರಿಗೆ ಕಳೆದ 20 ವರ್ಷಗಳಿಂದ ಮಾಸ್ತಿ ಪ್ರಶಸ್ತಿಯನ್ನು ಸಮಿತಿಯ ವತಿಯಿಂದ ನೀಡುತ್ತಾ ಬರಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.