ADVERTISEMENT

‘ಮಿಸ್ಟರ್ ಮೋದಿ, ನಿಮ್ಮಿಂದ ಮಾನಹಾನಿಯಾಗಿದೆ’

ಬೇಷರತ್ ಕ್ಷಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಮೇ 2018, 13:20 IST
Last Updated 7 ಮೇ 2018, 13:20 IST
ನರೇಂದ್ರ ಮೋದಿ, ಸಿದ್ದರಾಮಯ್ಯ, ಅಮಿತ್‌ ಶಾ
ನರೇಂದ್ರ ಮೋದಿ, ಸಿದ್ದರಾಮಯ್ಯ, ಅಮಿತ್‌ ಶಾ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಡಿಯೂರಪ್ಪ ಅವರಿಂದ ಮಾನಹಾನಿಯಾಗಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೂವರಿಗೂ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ‘ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ₹100 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದು ಎಚ್ಚರಿಸಿದ್ದಾರೆ.

ಚುನಾವಣಾ ಪ್ರಚಾರ ವೇಳೆ ಮುದ್ರಣ, ಟೆಲಿವಿಷನ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪ್ರಕಟಿಸಿದ ಜಾಹೀರಾತುಗಳು ಸುಳ್ಳು ಮಾಹಿತಿಗಳಿಂದ ಕೂಡಿತ್ತು ಎಂದು ದೂರಿರುವ ಸಿದ್ದರಾಮಯ್ಯ, ಬಿಜೆಪಿ ಪ್ರಧಾನ ಕಾರ್ಯದರ್ಶಿಗೂ ನೋಟಿಸ್ ಕಳುಹಿಸಿದ್ದಾರೆ.

ಐಪಿಸಿ 499 (ಮಾನಹಾನಿ), 500 (ಮಾನಹಾನಿಗೆ ಶಿಕ್ಷೆ), 501 (ಮಾನಹಾನಿಗೆ ಸಂಬಂಧಿಸಿದ ವಿಷಯಗಳ ಮುದ್ರಣ) 502ರ (ಮಾನಹಾನಿ ಅಂಶಗಳನ್ನು ಮುದ್ರಿಸಿ ಮಾರಾಟ) ಅನ್ವಯ ನೀವು ಅಪರಾಧ ಎಸಗಿದ್ದೀರಿ. ನೀವು ಈ ತಕ್ಷಣದಿಂದ ನನ್ನ ವಿರುದ್ಧ ಆರೋಪ ಮಾಡುವುದನ್ನು ನಿಲ್ಲಿಸಬೇಕು. ಮುದ್ರಣ, ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.