ADVERTISEMENT

ಮುಕ್ತ ವಿ.ವಿ. ಉಳಿಸಲು ಎಬಿವಿಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 8:55 IST
Last Updated 13 ಅಕ್ಟೋಬರ್ 2017, 8:55 IST
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಯನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು   

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವನ್ನು (ಕೆಎಸ್‌ಒಯು) ಮುಚ್ಚಲು ಮುಂದಾಗಿದೆ ಎಂದು ಆರೋಪಿಸಿ ಎಬಿವಿಪಿ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಎಬಿವಿಪಿ ಸದಸ್ಯರು ವಿಧಾನಸೌಧ ಮುತ್ತಿಗೆಗೆ ಮೆರವಣಿಗೆಯಲ್ಲಿ ಹೊರಟ ವೇಳೆ ಮಹಾರಾಣಿ ಕಾಲೇಜು ಜಂಕ್ಷನ್‌ ಬಳಿ ಪೊಲೀಸರು ಅವರನ್ನು ತಡೆದರು.

ವಿಧಾನಸೌಧದ ಕಡೆಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಸುಮಾರು 70 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.