ADVERTISEMENT

ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಗತಿಪರರು

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2018, 7:27 IST
Last Updated 29 ಮಾರ್ಚ್ 2018, 7:27 IST
ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಗತಿಪರರು
ಮುಖ್ಯಮಂತ್ರಿ ಭೇಟಿ ಮಾಡಿದ ಪ್ರಗತಿಪರರು   

ಬೆಂಗಳೂರು: ಕೋಮುವಾದಿ ಬಿಜೆಪಿಯನ್ನು ಸೋಲಿಸಲು ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಪ್ರಗತಿಪರ ಶಕ್ತಿಗಳನ್ನು ಒಗ್ಗೂಡಿಸಿಕೊಂಡು ಹೋಗುವಂತೆ ಪ್ರಗತಿಪರರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿತು.

ಸಂವಿಧಾನ ಉಳಿವಿಗಾಗಿ ಕರ್ನಾಟಕ ಹೆಸರಿನಲ್ಲಿ ಗುರುತಿಸಿಕೊಂಡಿರುವ ಪ್ರಗತಿಪರ ಹೋರಾಟಗಾರರು, ಬರಹಗಾರರು ಸಿದ್ದರಾಮಯ್ಯ ಅವರನ್ನು ಗುರುವಾರ ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾದರು.

ಸಂವಿಧಾನ ಉಳಿಯಬೇಕಾದರೆ ಜೆಡಿಎಸ್ ಸೇರಿದಂತೆ ಎಲ್ಲ ಜಾತ್ಯತೀತ ಪಕ್ಷಗಳು ಹಾಗೂ ಪ್ರಗತಿಪರ ಶಕ್ತಿಗಳು ಒಟ್ಟಾಗಬೇಕಾದ ಕಾಲ ಇದಾಗಿದೆ. ಚುನಾವಣೆಯಲ್ಲಿ ಸೀಟು ಹಂಚಿಕೆ, ಹೊಂದಾಣಿಕೆ ಮಾಡಿಕೊಳ್ಳುವುದು ಅಗತ್ಯ ಎಂದು ನಿಯೋಗದ ನೇತೃತ್ವ ವಹಿಸಿದ್ದ ವಕೀಲ ಎ.ಕೆ‌.ಸುಬ್ಬಯ್ಯ, ಪತ್ರಕರ್ತ ಇಂದೂಧರ ಹೊನ್ನಾಪುರ ಪ್ರತಿಪಾದಿಸಿದರು.

ADVERTISEMENT

</p><p>ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕಾರಣಾಂತರಗಳಿಂದ ಸೀಟು ಹಂಚಿಕೆಯಲ್ಲಿ ರಾಜಿ ಮಾಡಿಕೊಳ್ಳುವುದು ಕಷ್ಟ. ಬೇರೆ ಪಕ್ಷದವರಿಗೆ ಸೀಟು ಬಿಟ್ಟು ಕೊಡಲು ಆಗುವುದಿಲ್ಲ. ಪ್ರಗತಿಪರ ಶಕ್ತಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಬಗ್ಗೆ ಗಂಭೀರ ಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.</p><p>ನಿಯೋಗದಲ್ಲಿ ಬಿ.ಟಿ.ಲಲಿತಾ ನಾಯಕ, ಕೆ.ಎಲ್.ಅಶೋಕ ಮೊದಲಾದವರು ಇದ್ದರು.</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.