ADVERTISEMENT

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಸೇವೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST

ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಹುದ್ದೆಯಿಂದ ಆರ್.ಪಿ.ಜಗದೀಶ್ ಅವರನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಜಗದೀಶ್  ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದರು. ಅವರನ್ನು ಈಗ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

ತಮ್ಮ ರಾಜಕೀಯ ಕಾರ್ಯದರ್ಶಿ ಹಾಗೂ ಮಾಧ್ಯಮ ಸಲಹೆಗಾರ ಹುದ್ದೆಗಳು ತೆರವಾಗಿವೆ. ಈ ಹುದ್ದೆಗಳಿಗೆ ಹತ್ತು ದಿನಗಳಲ್ಲಿ ಹೊಸದಾಗಿ ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದರು.

ವಿಡಿಯೊ ಸಂವಾದ ಕಾರ್ಯಕ್ರಮ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, `ಜಗದೀಶ್ ಅವರು 8-10 ದಿನಗಳಿಂದ ಕಚೇರಿಯಲ್ಲಿ ಲಭ್ಯವಿರಲಿಲ್ಲ. ಅವರ ನೇಮಕಾತಿ ಆದೇಶ ರದ್ದಾಗಿದೆ. ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ.ಪುಟ್ಟಸ್ವಾಮಿ, ಅವರಾಗಿಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ~ ಎಂದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.