ADVERTISEMENT

‘ಮುಖ್ಯಮಂತ್ರಿ ಯಾತ್ರೆಗೆ ಹೈಕಮಾಂಡ್‌ ಸೂಚನೆ’

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 19:30 IST
Last Updated 5 ಡಿಸೆಂಬರ್ 2017, 19:30 IST
‘ಮುಖ್ಯಮಂತ್ರಿ ಯಾತ್ರೆಗೆ ಹೈಕಮಾಂಡ್‌ ಸೂಚನೆ’
‘ಮುಖ್ಯಮಂತ್ರಿ ಯಾತ್ರೆಗೆ ಹೈಕಮಾಂಡ್‌ ಸೂಚನೆ’   

ಬೆಂಗಳೂರು:‌ ‘ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 13ರಿಂದ ಕೈಗೊಳ್ಳಲಿರುವ ರಾಜ್ಯ ಪ್ರವಾಸದ ಬಗ್ಗೆ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪ್ರವಾ
ಸದ ಮೂಲಕ ಸರ್ಕಾರದ ಕಾರ್ಯಕ್ರಮಗಳಿಗೆ ಚಾಲನೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್‌ ತಿಳಿಸಿದರು.

‘ಸರ್ಕಾರದ ಕಾರ್ಯಕ್ರಮಗಳಲ್ಲಿ ಪಕ್ಷದ ಅಧ್ಯಕ್ಷರು ಭಾಗಿಯಾದರೆ ಅದು ಸರ್ಕಾರಿ ಕಾರ್ಯಕ್ರಮ ಆಗುವುದಿಲ್ಲ. ಪಕ್ಷದ ವೇದಿಕೆಯಾಗುತ್ತದೆ. ಅಧ್ಯ
ಕ್ಷರು ಮತ್ತು ನಾವು ಬೇರೆ ಯಾತ್ರೆ ಮಾಡುತ್ತೇವೆ’ ಎಂದರು.

ವೇಣುಗೋಪಾಲ್‌ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, ‘ಬಿಜೆಪಿಯವರ ತಟ್ಟೆಯಲ್ಲೇ ಹೆಗ್ಗಣ ಬಿದ್ದಿದೆ’ ಎಂದು ವ್ಯಂಗ್ಯವಾಗಿ ಹೇಳಿದರು.

ADVERTISEMENT

‘ವೇಣುಗೋಪಾಲ್‌ ವಿರುದ್ಧ ಪ್ರತಿಭಟನೆ ನಡೆಸಿದರೆ ನಾವು ಕೇಂದ್ರದ ನಾಯಕರನ್ನು ಗುರಿಯಾಗಿಟ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದರು.

ವೇಣುಗೋಪಾಲ್‌ ಸಲಹೆ: ರಾಜ್ಯದ ಎಲ್ಲ ಕಾಲೇಜುಗಳಲ್ಲಿ ಎನ್‌ಎಸ್‌ಯುಐ ಘಟಕ (ಕಾಂಗ್ರೆಸ್‌ ವಿದ್ಯಾರ್ಥಿ ಸಂಘಟನೆ) ರಚಿಸುವಂತೆ ವೇಣುಗೋಪಾಲ್‌ ಸಲಹೆ ನೀಡಿದ್ದಾರೆ.

‘ಸಮಿತಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಬೇಕು. ವಿಧಾನಸಭಾ ಮಟ್ಟದಲ್ಲಿ 15 ಸದಸ್ಯರ ಸಮಿತಿ ರಚಿಸಬೇಕು. ಆ ಸಮಿತಿಗಳ ಮೂಲಕ ಸ್ಥಳಿಯ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.