ADVERTISEMENT

ಮುನಿರಾಜು ನ್ಯಾಯಾಂಗ ಬಂಧನ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 13 ಮಾರ್ಚ್ 2012, 19:30 IST
Last Updated 13 ಮಾರ್ಚ್ 2012, 19:30 IST

ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದ ಸಿ.ಡಿ.ಯನ್ನು ನಾಶಪಡಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮುನಿರಾಜು ಅವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ.

ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸಾಕ್ಷ್ಯವಾಗಬಲ್ಲ ಸಿ.ಡಿ. ಒಂದನ್ನು ತುಂಡು ಮಾಡುತ್ತಿದ್ದ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದರು.

ಸೋಮವಾರ ರಾತ್ರಿಯೇ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರನ್ನು ಒಂದು ದಿನದ ಮಟ್ಟಿಗೆ ನ್ಯಾಯಾಂಗ ವಶಕ್ಕೆ ಒಪ್ಪಿಸಿ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಆದೇಶಿಸಿದ್ದರು.

ADVERTISEMENT

ಬಂಧಿತರನ್ನು ಮಂಗಳವಾರ ಪುನಃ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಂಗ ಬಂಧನವನ್ನು 15 ದಿನಗಳಿಗೆ ವಿಸ್ತರಿಸಿ ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.