ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಕುರಿತು ಒಮ್ಮತ ಮೂಡದ ಕಾರಣ ಈ ಸಂಬಂಧ ಮಂಗಳವಾರ ನಡೆದ ಸಭೆಯನ್ನು ಇದೇ 21ಕ್ಕೆ ಮುಂದೂಡಲಾಗಿದೆ.
ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಆರ್.ಅಶೋಕ, ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ, ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್. ಶಂಕರಮೂರ್ತಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ್ ಭಾಗವಹಿಸಿದ್ದರು.
ಯಾರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂಬ ವಿಷಯದಲ್ಲಿ ಒಮ್ಮತ ಮೂಡಿಲ್ಲ. ಹೀಗಾಗಿ ಹೆಸರು ಅಂತಿಮಗೊಳಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಯೊಬ್ಬರನ್ನು ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಅವಕಾಶ ಇದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶರು ಮತ್ತು ಮಾನವ ಹಕ್ಕುಗಳ ವಿಷಯದಲ್ಲಿ ಅನುಭವ ಇರುವ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಲು ನಿಯಮಗಳಲ್ಲಿ ಅವಕಾಶ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.