ADVERTISEMENT

ಮೂರು ವರ್ಷದಲ್ಲಿ 2,448 ರೈತರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2017, 19:30 IST
Last Updated 21 ಮಾರ್ಚ್ 2017, 19:30 IST
ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷದಲ್ಲಿ ಒಟ್ಟು 2,448 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೃಷಿ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಮಹಂತೇಶ ಕವಟಗಿಮಠ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, ಆತ್ಮಹತ್ಯೆ ಮಾಡಿಕೊಂಡ ರೈತರ  ಪೈಕಿ  1,651 ರೈತರ ಕುಟುಂಬಕ್ಕೆ  ತಲಾ ₹5 ಲಕ್ಷ ಪರಿಹಾರ ನೀಡಲಾಗಿದೆ ಎಂದು  ವಿವರಿಸಿದ್ದಾರೆ.
 
ರೈತರ ಸಾವಿಗೆ ಸಾಲದ ಬಾಧೆ ಮತ್ತು ದುಬಾರಿ ಬಡ್ಡಿ ಕಾರಣ ಎಂಬ ಮಾತು ಕೇಳಿಬಂದಿತ್ತು. ಇದನ್ನು ನಿಯಂತ್ರಿಸಲು  ಈವರೆಗೆ 1,332 ಮೊಕದ್ದಮೆ ದಾಖಲಿಸಿ,  585 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.