ADVERTISEMENT

ಮೂವರಿಗೆ ಕಸಾಪ ಶ್ರೀವಿಜಯ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2016, 19:33 IST
Last Updated 11 ಏಪ್ರಿಲ್ 2016, 19:33 IST

ಬೆಂಗಳೂರು: ಸಾಹಿತಿಗಳಾದ ಡಾ. ರಾಜಶೇಖರ ಮಠಪತಿ, ಆರ್. ತಾರಿಣಿ ಶುಭದಾಯಿನಿ ಮತ್ತು ಮಂಜುನಾಥ ಬಮ್ಮನಕಟ್ಟಿ ಅವರಿಗೆ ಕ್ರಮವಾಗಿ 2013, 2014 ಮತ್ತು 2015ನೇ ಸಾಲಿನ ‘ಶ್ರೀವಿಜಯ ಸಾಹಿತ್ಯ ಪ್ರಶಸ್ತಿ’ ಘೋಷಣೆಯಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಈ ಪ್ರಶಸ್ತಿಯು ತಲಾ ₹ 1,11,111 ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಮೇ 5ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ     ಗೌರವ ಕಾರ್ಯದರ್ಶಿ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.