ಮಂಗಳೂರು: `ಮೇಯರ್, ಉಪ ಮೇಯರ್ ಆಯ್ಕೆಯಲ್ಲಿ ಮಹಿಳೆಯರಿಗೆ ಶೇ 50 ಮೀಸಲಾತಿ ನೀಡುವಂತೆ ಹೈಕೋರ್ಟ್ ಆದೇಶ ನೀಡಿರುವುದರಿಂದ ಆಯ್ಕೆ ಪಟ್ಟಿ ಪ್ರಕಟ ತಡವಾಗಿದೆ. 2001ರ ಜನಸಂಖ್ಯೆಯನ್ನು ಆಧರಿಸಿ ಕಾನೂನು ತಜ್ಞರ ಸಲಹೆ ಪಡೆದು ಸದ್ಯವೇ ಪಟ್ಟಿಯನ್ನು ಪ್ರಕಟಿಸಲಾಗುವುದು'ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಭಾನುವಾರ ಇಲ್ಲಿ ಹೇಳಿದರು.
ಪುರಭವನದಲ್ಲಿ ನಾರಾಯಣ ಗುರು ಯುವ ವೇದಿಕೆಯ ವತಿಯಿಂದ ಸನ್ಮಾನ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.`ಮಹಿಳಾ ಮೀಸಲಾತಿ ಮತ್ತು ಸಾಮಾನ್ಯ ಮೀಸಲಾತಿಯಲ್ಲಿ ಯಾವುದೇ ವ್ಯತ್ಯಯ ಬಾರದಂತೆ ಗಮನ ಹರಿಸಿ ಪಟ್ಟಿ ಪ್ರಕಟಿಸಲಾಗುವುದು.
ಹಿಂದಿನ ಸರ್ಕಾರದ ಅವಧಿಯಲ್ಲಿ ರೂಪಿಸಲಾದ ಸಮಗ್ರ ಅಭಿವೃದ್ಧಿ ಯೋಜನೆಯನ್ನು ಪುನರ್ ಪರಿಶೀಲಿಸಲಾಗುವುದು. ಲೋಪ ದೋಷಗಳನ್ನು ಸರಿಪಡಿಸಿ ಬಡವರಿಗೆ ಮನೆ ಕಟ್ಟಲು ಅನುಕೂಲವಾಗುವಂತೆ ತಿದ್ದುಪಡಿ ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.