ADVERTISEMENT

ಮೇಲುಕೋಟೆ: ಬಿಎಸ್‌ವೈ ಹೆಸರಲ್ಲಿ ಶೋಭಾ ಪೂಜೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2012, 19:30 IST
Last Updated 18 ಫೆಬ್ರುವರಿ 2012, 19:30 IST
ಮೇಲುಕೋಟೆ: ಬಿಎಸ್‌ವೈ ಹೆಸರಲ್ಲಿ ಶೋಭಾ ಪೂಜೆ
ಮೇಲುಕೋಟೆ: ಬಿಎಸ್‌ವೈ ಹೆಸರಲ್ಲಿ ಶೋಭಾ ಪೂಜೆ   

ಪಾಂಡವಪುರ: ಪುರಾಣ ಪ್ರಸಿದ್ಧ ಮೇಲುಕೋಟೆಯ ಚಲುವನಾರಾಯಣಸ್ವಾಮಿ ಮತ್ತು ಯೋಗಾನರಸಿಂಹಸ್ವಾಮಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿನಲ್ಲಿ ಅರ್ಚನೆ ಮಾಡಿಸಿ ಪೂಜೆ ಸಲ್ಲಿಸಿದರು.

ಶೋಭಾ ಅವರು ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಹಾಗೂ ಶಾಸಕಿ ಭಾರತಿ ಶೆಟ್ಟಿ ಅವರೊಂದಿಗೆ ಬೆಳಿಗ್ಗೆ 9 ಗಂಟೆಗೆ ಆಗಮಿಸಿದರು.

ಚಲುವನಾರಾಯಣಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅರ್ಚಕರಾದ ನರಸಿಂಹ ಭಟ್ಟ, ನರಸಿಂಹ ಅಯ್ಯಂಗಾರ್ ಅವರು, ಯಾರ ಹೆಸರಿನಲ್ಲಿ ಅರ್ಚನೆ ಮಾಡಲಿ?~ ಎಂಬ ಪ್ರಶ್ನೆಗೆ ಸಚಿವೆ, ಬಿ.ಎಸ್. ಯಡಿಯೂರಪ್ಪ ಅವರ ಹೆಸರು ಹೇಳಿದರು. ಅದರಂತೆ ಅರ್ಚನೆ ಮಾಡಲಾಯಿತು. ಚಲುವನಾರಾಯಣಸ್ವಾಮಿ ಉತ್ಸವ ಮೂರ್ತಿ, ಯದುಗಿರಿದೇವಿ, ಶ್ರೀರಾಮಾನುಜಚಾರ್ಯ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ನಂತರ ಯೋಗನರಸಿಂಗಸ್ವಾಮಿ ದೇವಸ್ಥಾನಕ್ಕೆ ಮೆಟ್ಟಿಲು ಏರಿ ತೆರಳಿ ಪೂಜೆ ಸಲ್ಲಿಸಿದರು. ಅರ್ಚಕರಾದ ನಾರಾಯಣ ಭಟ್ಟ, ಶ್ರೀಧರ, ಶ್ರೀನಿವಾಸ್ ಅವರು ವಿಶೇಷ ಪೂಜೆ ನೆರವೇರಿಸಿಕೊಟ್ಟರು. ಟಿಪ್ಪು ಸುಲ್ತಾನ್ ಕೊಡುಗೆಯಾಗಿ ನೀಡಿರುವ ನಗಾರಿ ಹಾಗೂ ಗೋಪುರವನ್ನು ಶೋಭಾ ವೀಕ್ಷಿಸಿದರು.

ಮೇಲುಕೋಟೆಯ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ. ಸಮಿತಿ ಅಧ್ಯಕ್ಷ ರವಿನಾರಾಯಣ ರಾಜೀನಾಮೆ ಸಲ್ಲಿಸಿದ್ದಾರೆ. ಕೇವಲ 3 ಸಭೆಗಳು ಮಾತ್ರ ನಡೆದಿವೆ ಎಂಬ ಬಗೆಗೆ ಮಾಧ್ಯಮಗಳು ಗಮನ ಸೆಳೆದಾಗ, `ಮೇಲಕೋಟೆಯ ಪ್ರಗತಿಗೆ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಹಣ ಬಿಡುಗಡೆ ಮಾಡಿದ್ದರು. ಆ ಬಗೆಗೆ ಗಮನ ಹರಿಸುತ್ತೇನೆ~ ಎಂದು ನುಡಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.