ADVERTISEMENT

ಮೇ 11ಕ್ಕೆ ಕಾಮೆಡ್‌–ಕೆ ಸಿಇಟಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2013, 20:18 IST
Last Updated 18 ಡಿಸೆಂಬರ್ 2013, 20:18 IST

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕಾಮೆಡ್‌ – ಕೆ 2014ರ ಮೇ 11ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಲಿದೆ.

ವೈದ್ಯಕೀಯ/ದಂತ ವೈದ್ಯಕೀಯ, ಎಂಜಿನಿಯರಿಂಗ್‌ ಮತ್ತಿತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕಾಮೆಡ್‌ – ಕೆ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

2006ರ ಕರ್ನಾಟಕ ವೃತ್ತಿಶಿಕ್ಷಣ ಸಂಸ್ಥೆಗಳ (ಪ್ರವೇಶ ಮತ್ತು ನಿಯಂತ್ರಣ) ಕಾಯ್ದೆ ಪ್ರಕಾರ ಖಾಸಗಿ ಕಾಲೇಜುಗಳು ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಬೇಕಾಗುತ್ತದೆ. ಹೀಗಾಗಿ ಎಲ್ಲ ಖಾಸಗಿ ಕಾಲೇಜುಗಳು ಈ ಬಾರಿ ಕಾಮೆಡ್‌ –ಕೆ ಅಡಿ ಬರಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.