ADVERTISEMENT

ಮೋದಿಗೆ ‘ಅರ್ಧ ಚೆಡ್ಡಿ ತೊಟ್ಟು, ಕಡ್ಡಿ ಹಿಡಿದು ಸುಳ್ಳು ಹೇಳೋದನ್ನ ಆರ್‌ಎಸ್‌ಎಸ್‌ ಹೇಳಿಕೊಟ್ಟಿದೆ’: ರಾಹುಲ್‌ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 10:40 IST
Last Updated 3 ಏಪ್ರಿಲ್ 2018, 10:40 IST
ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ).
ರಾಹುಲ್‌ ಗಾಂಧಿ (ಸಂಗ್ರಹ ಚಿತ್ರ).   

ಶಿವಮೊಗ್ಗ: ‘ದೇಶದಲ್ಲಿ ಒಂದು ಕಡೆ ಪ್ರಶ್ನೆಪತ್ರಿಕೆ ಸೋರಿಕೆ, ಮತ್ತೊಂದು ಕಡೆ ಚುನಾವಣಾ ಆಯೋಗದಿಂದ ಮಾಹಿತಿ ಸೋರಿಕೆಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಇದು ಮೋದಿ ಕಾಲ’ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಗಳವಾರ ನಡೆದ ಜನಾಶೀರ್ವಾದ ಯಾತ್ರೆಯಲ್ಲಿ ಅವರು ಮಾತನಾಡಿದರು.

‘ರಫೆಲ್ ಯುದ್ಧ ವಿಮಾನ ಖರೀದಿ ಒಪ್ಪಂದ ಎಚ್ಎಎಲ್ ಜತೆ ಆಗಬೇಕಿತ್ತು. ಅದನ್ನು ಮೋದಿ ಅವರು ತಮ್ಮ ಮಿತ್ರರಿಗೆ ಮೂರು ಪಟ್ಟು ಹೆಚ್ಚು ಮೊತ್ತಕ್ಕೆ ಖರೀದಿಗಾಗಿ ಕೊಟ್ಟಿದ್ದಾರೆ’ ಎಂದು ಹೇಳಿದರು.

ADVERTISEMENT

ಮೋದಿ ಅವರಿಗೆ ‘ಅರ್ಧ ಚೆಡ್ಡಿ ತೊಟ್ಟು, ಕಡ್ಡಿ ಹಿಡಿದು ಸುಳ್ಳು ಹೇಳೋದನ್ನ ಆರ್‌ಎಸ್‌ಎಸ್‌ ಹೇಳಿಕೊಟ್ಟಿದೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.