ಬೆಂಗಳೂರು: ನಗರದ ಸಿಟಿ ಸಿವಿಲ್ ನ್ಯಾಯಾಲಯದ ಆವರಣದಲ್ಲಿ ವಕೀಲರು ಸೋಮವಾರ ಮೌನ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
`ಒಟ್ಟು ನಾನೂರಕ್ಕೂ ಅಧಿಕ ಮಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ. ನಾಲ್ವರು ಡಿಸಿಪಿಗಳು, ಎಂಟು ಮಂದಿ ಎಸಿಪಿಗಳು, ಇಪ್ಪತ್ತೈದು ಮಂದಿ ಇನ್‌ಸ್ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ರಾಜ್ಯ ಸಶಸ್ತ್ರ ಮೀಸಲು ಪಡೆ ಮತ್ತು ನಗರ ಸಶಸ್ತ್ರ ಮೀಸಲು ಪಡೆ ತುಕಡಿಯನ್ನೂ ನಿಯೋಜಿಸಲಾಗುತ್ತದೆ~ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಟಿ. ಸುನಿಲ್ ಕುಮಾರ್ `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.