ADVERTISEMENT

ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಇಂದು ಆದೇಶ?

​ಪ್ರಜಾವಾಣಿ ವಾರ್ತೆ
Published 12 ಜೂನ್ 2012, 19:30 IST
Last Updated 12 ಜೂನ್ 2012, 19:30 IST

ಬೆಂಗಳೂರು: ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಲಿದೆ. 

 ಜಿಂದಾಲ್ ಸಮೂಹದಿಂದ ಯಡಿಯೂರಪ್ಪ ಅವರು ತಮ್ಮ ಕುಟುಂಬದ ಸದಸ್ಯರು ನಡೆಸುವ ಶೈಕ್ಷಣಿಕ ಟ್ರಸ್ಟ್‌ಗೆ ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರರು ನಿರೀಕ್ಷಣಾ ಜಾಮೀನು ಕೋರಿದ್ದಾರೆ. 

ಸಿಬಿಐ  ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್. ವೆಂಕಟಸುದರ್ಶನ್ ಅವರ ಎದುರು ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್, ಸಿಬಿಐ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ಭಾನ್ ವಾದ ಮಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.