ADVERTISEMENT

‘ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪವಿದೆ’

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2017, 19:30 IST
Last Updated 4 ಸೆಪ್ಟೆಂಬರ್ 2017, 19:30 IST

ಬೆಂಗಳೂರು: ‘ಶಿವರಾಮ ಕಾರಂತ ಬಡಾವಣೆಯ ಅಕ್ರಮ ಡಿನೋಟಿಫಿಕೇಷನ್‌ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಜಮೀನಿನ ಮಾಲೀಕರಿಂದ ಹಣ ಪಡೆದು ಡಿನೋಟಿಫೈ ಮಾಡಲು ಆದೇಶಿಸಿದ್ದಾರೆ ಎಂಬ ಗಂಭೀರ ಆರೋಪವಿದೆ. ಈ ಕುರಿತು ಕೂಲಂಕುಷ ತನಿಖೆ ನಡೆಸುವ ಅಗತ್ಯವಿದೆ’ ಎಂದು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಹೈಕೋರ್ಟ್‌ಗೆ ತಿಳಿಸಿದೆ.

ಎಸಿಬಿ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಎಸಿಬಿ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಅವರು, ‘ಈ ಹಂತದಲ್ಲಿ ತನಿಖೆಗೆ ತಡೆ ನೀಡುವಂತೆ ಕೋರಿರುವ ಅರ್ಜಿದಾರರ ಮನವಿಯನ್ನು ಮಾನ್ಯ ಮಾಡಬಾರದು’ ಎಂದರು.

ADVERTISEMENT

ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ. ಅಂತೆಯೇ ಸೆ.5ರವರೆಗೂ ಅರ್ಜಿದಾರರನ್ನು ಎಸಿಬಿ ಬಂಧಿಸಬಾರದು ಎಂಬ ಆದೇಶವನ್ನೂ ನ್ಯಾಯಪೀಠ ವಿಸ್ತರಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.