
ಪ್ರಜಾವಾಣಿ ವಾರ್ತೆಬಳ್ಳಾರಿ (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಪಕ್ಷಕ್ಕೆ ಮರಳಿ ಕರೆತರಲು ಬಿಜೆಪಿ ವರಿಷ್ಠರು ಹಸಿರು ನಿಶಾನೆ ನೀಡಿದ್ದಾರೆ ಎಂದು ಕೆ. ಎಸ್. ಈಶ್ವರಪ್ಪ ಭಾನುವಾರ ತಿಳಿಸಿದ್ದಾರೆ.
ಯಡಿಯೂರಪ್ಪ ಹಿಂದಿರುಗಲು ಕೇಂದ್ರ ನಾಯಕರು ಒಪ್ಪಿಗೆ ನೀಡಿದ್ದಾರೆ. ಶೀಘ್ರವೇ ಅವರು ಪಕ್ಷಕ್ಕೆ ಮರಳಲಿದ್ದಾರೆ. ಪಕ್ಷಕ್ಕೆ ಬರಲು ಅವರು ಯಾವುದೇ ಬೇಡಿಕೆ ಇಟ್ಟಿಲ್ಲ. ಬದಲಾಗಿ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡುವ ಏಕೈಕ ಉದ್ದೇಶದಿಂದ ಬಿಜೆಪಿಗೆ ಬರುತ್ತಿದ್ದಾರೆ ಎಂದು ಈಶ್ವರಪ್ಪ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.