ADVERTISEMENT

`ಯಾತ್ರಿಗಳ ವಾಪಸ್‌ಗೆ ಕ್ರಮ'

​ಪ್ರಜಾವಾಣಿ ವಾರ್ತೆ
Published 22 ಜೂನ್ 2013, 19:59 IST
Last Updated 22 ಜೂನ್ 2013, 19:59 IST

ಬೆಂಗಳೂರು: ಉತ್ತರಾಖಂಡದ ಪ್ರವಾಹದಲ್ಲಿ ಸಿಲುಕಿರುವ ರಾಜ್ಯದ ಯಾತ್ರಿಕರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಅವರಿಗೆ  ಔಷಧಿ, ಆಹಾರ ಸಾಮಗ್ರಿ ಒದಗಿಸುವುದಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಪಕ್ಷದ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದಲ್ಲಿ ಶನಿವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಮಾಡಿದ ಕಾಂಗ್ರೆಸ್ ಕಾರ್ಯಕರ್ತರ ನಿಯೋಗ ಉತ್ತರಾಖಂಡ ಪ್ರವಾಹ ಸಂತ್ರಸ್ತರಿಗೆ ನೆರವು ಕಲ್ಪಿಸುವುದಕ್ಕಾಗಿ ಪ್ರಧಾನಮಂತ್ರಿ ಪರಿಹಾರ ನಿಧಿಗೆ ಕಳುಹಿಸಲು ಆರೂವರೆ ಲಕ್ಷ ರೂಪಾಯಿ ಮೊತ್ತದ ಚೆಕ್ ಹಸ್ತಾಂತರಿಸಿದರು.

ಬಳಿಕ ಸಿದ್ದರಾಮಯ್ಯ, ಪ್ರವಾಹದಲ್ಲಿ  ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದಕ್ಕಾಗಿ ಸಚಿವ ಸಂತೋಷ್ ಲಾಡ್  ನೇತೃತ್ವದಲ್ಲಿ ಉನ್ನತಮಟ್ಟದ ತಂಡವೊಂದನ್ನು ಕಳುಹಿಸಲಾಗಿದೆ. ಸಚಿವರು ನಿರಂತರವಾಗಿ ತಮ್ಮಂದಿಗೆ ಸಂಪರ್ಕದಲ್ಲಿ ಇದ್ದಾರೆ. ಪ್ರವಾದಲ್ಲಿ ಸಿಲುಕಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.