ADVERTISEMENT

ಯಾವ ಮುಖ ಹೊತ್ತು ಬರ್ತಿದ್ದೀರಿ?: ಮೇವಾನಿ

​ಪ್ರಜಾವಾಣಿ ವಾರ್ತೆ
Published 7 ಮೇ 2018, 19:30 IST
Last Updated 7 ಮೇ 2018, 19:30 IST
ಜಿಗ್ನೇಶ್‌ ಮೇವಾನಿ
ಜಿಗ್ನೇಶ್‌ ಮೇವಾನಿ   

ವಿಜಯಪುರ: ‘ಯಾವ ಮುಖ ಹೊತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದೀರಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ ಇಲ್ಲಿ ಪ್ರಶ್ನಿಸಿದರು.

ಕಳೆದ ಡಿಸೆಂಬರ್‌ ಅಂತ್ಯದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಯಾದ ನಗರದ ದಲಿತ ವಿದ್ಯಾರ್ಥಿನಿ ನಿವಾಸಕ್ಕೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳಿದ ಅವರು, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

‘ನಾಲ್ಕು ತಿಂಗಳು ಗತಿಸಿದರೂ ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ದೊರೆತಿಲ್ಲ. ಆರೋಪಿಗಳ ಜತೆ ಬಿಜೆಪಿ ಮುಖಂಡರು, ಆರ್‌ಎಸ್‌ಎಸ್‌ ಪ್ರಮುಖರ ನಂಟಿರುವ ಛಾಯಾಚಿತ್ರಗಳ ಸಾಕ್ಷ್ಯ ದೊರೆತರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.