ADVERTISEMENT

ಯುವಕನ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2017, 19:30 IST
Last Updated 2 ಅಕ್ಟೋಬರ್ 2017, 19:30 IST

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲ್ಲೂಕಿನ ಹಾರೂಗೇರಿಯಲ್ಲಿ ಇತ್ತೀಚೆಗೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಬಾಲಕಿಯ ಭಾವಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ್‌ ಮಾಡಿದ್ದ ಆರೋಪದ ಮೇಲೆ ಬೆಳಗಾವಿ ನಿವಾಸಿ ರಾಕೇಶ ರಾಮ್‌ಸಿಂಗ್‌ ನಂದಗಡಕರ (27) ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ.

‘ಪೋಕ್ಸೊ ಕಾಯ್ದೆ ಪ್ರಕಾರ, ಸಂತ್ರಸ್ತ ಬಾಲಕಿಯ ಗುರುತು ಬಹಿರಂಗಪಡಿಸಬಾರದು. ಆದರೆ, ಆರೋಪಿಯು ಬಾಲಕಿಯ ಭಾವಚಿತ್ರವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದ. ಅಲ್ಲದೇ, ತನ್ನ ವಾಟ್ಸ್‌ಆ್ಯಪ್‌ ಗ್ರೂಪ್‌ಗಳಿಗೂ ರವಾನಿಸಿದ್ದ. ಈತನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಸೆ. 21ರಂದು ಹಾರೂಗೇರಿಯ ಕಬ್ಬಿನ ಗದ್ದೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಆರೋಪಿ ಉದ್ದಪ್ಪ ರಾಮಪ್ಪ ಗಾಣಿಗೇರ ಎಂಬಾತನನ್ನು ಪೊಲೀಸರು ಬಂಧಿಸಿದ್ದನ್ನು ಸ್ಮರಿಸಬಹುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.