ADVERTISEMENT

ರಘು ಆಚಾರ್‌ಗೆ ಪಕ್ಷ ಸಂಘಟನೆಯ ಹೊಣೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2017, 19:30 IST
Last Updated 25 ಅಕ್ಟೋಬರ್ 2017, 19:30 IST

ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ಮತ್ತು ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತು ಮುಂದಿನ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಹೊಣೆಯನ್ನು ವಿಧಾನ ‍ಪರಿಷತ್‌ ಕಾಂಗ್ರೆಸ್‌ ಸದಸ್ಯ ರಘು ಆಚಾರ್‌ ಅವರಿಗೆ ಕೆಪಿಸಿಸಿ ವಹಿಸಿದೆ.

ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರ ನಿರ್ದೇಶನದಂತೆ, ಪ್ರಧಾನ ಕಾರ್ಯದರ್ಶಿ ವಿ.ವೈ. ಘೋರ್ಪಡೆ ಅವರು ರಘು ಆಚಾರ್‌ಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT