ADVERTISEMENT

ರಥಯಾತ್ರೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2011, 19:30 IST
Last Updated 29 ಅಕ್ಟೋಬರ್ 2011, 19:30 IST

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಜನಚೇತನ ರಥಯಾತ್ರೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್, ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ರಾಜ್ಯದಲ್ಲಿ ಯಾತ್ರೆ ತೆರಳುವ ಮಾರ್ಗದಲ್ಲಿ ಪ್ರತಿಭಟನೆ ನಡೆಸಲಾಗುವುದು. ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಭ್ರಷ್ಟಾಚಾರ ಮುಕ್ತ ಸ್ವಚ್ಛ ಆಡಳಿತ ಘೋಷವಾಕ್ಯದ ಈ ಯಾತ್ರೆಗೆ ನಿಜಕ್ಕೂ ಅರ್ಥ ಇಲ್ಲ. ಅವರದೇ ಪಕ್ಷದ ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವರು ಜೈಲು ಪಾಲಾಗಿದ್ದಾರೆ. ಈ ಸಂದರ್ಭದಲ್ಲಿ ಭ್ರಷ್ಟಾಚಾರ ವಿರುದ್ಧದ ಹೋರಾಟ ಯಾರಿಗಾಗಿ ಎಂದು ಅವರು ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.