ಬೆಂಗಳೂರು: ಬೆಳಗೋಡು ರಮೇಶ್ ಭಟ್ ಅವರ `ಸೃಷ್ಟಿಯ ಮೇಲಣ ಕಣಿ~ ಸಾಹಿತ್ಯ ವಿಮರ್ಶೆ ಕೃತಿಗೆ `ಕಾವ್ಯಾನಂದ~ ಪುರಸ್ಕಾರ ದೊರೆತಿದೆ.
ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ ಸಾಹಿತಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮಮವಾದ ಕಾವ್ಯಾನಂದ ಹೆಸರಿನಲ್ಲಿ ಈ ಪುರಸ್ಕಾರ ನೀಡುತ್ತ ಬಂದಿದೆ. ಪುರಸ್ಕಾರವು ಇಪ್ಪತ್ತೈದು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.