ADVERTISEMENT

ರಸ್ತೆ ಅಪಘಾತ: ಶಾಸಕ ಶ್ರೀನಿವಾಸ ಮಾನೆ ಪಾರು

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಹಾವೇರಿ: ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ. ಮಾನೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾವೇರಿಯಿಂದ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಟೋಲ್ ಗೇಟ್ ಬಳಿ ಅಪಘಾತ ಸಂಭವಿಸಿದೆ.

 ಗಾಯಗೊಂಡಿದ್ದ ಮಾನೆ ಅವರು ಖಾಸಗಿ ಕಾರ್‌ನಲ್ಲಿ ಹುಬ್ಬಳ್ಳಿಗೆ ತೆರಳಿ ಚಿಕಿತ್ಸೆ ಪಡೆದರು. ಘಟನೆಯಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಂಕಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.