
ಪ್ರಜಾವಾಣಿ ವಾರ್ತೆಬೆಂಗಳೂರು: 2012-13ನೇ ಸಾಲಿನ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವಾನಿರತ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇಲ್ಲಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಇದೇ 15ರಂದು ನಡೆಯಲಿದೆ.
ಕೌನ್ಸೆಲಿಂಗ್‌ಗೆ ಸಂಬಂಧಿಸಿದ ಸೇವಾ ಹಿರಿತನದ ಪಟ್ಟಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ (www.karhfw.gov.in ) ಪ್ರಕಟಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇಲಾಖೆಯ ಸೇವಾನಿರತರಿಗೆ ಮೇ 17ರಂದು ನಡೆದ ಪ್ರಥಮ ಸುತ್ತಿನ ಕೌನ್ಸೆಲಿಂಗ್‌ನಲ್ಲಿ ನೀಡಲಾದ ಸ್ಥಾನಗಳನ್ನು ರದ್ದು ಮಾಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.