ADVERTISEMENT

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ: ಪರಮೇಶ್ವರ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2018, 7:26 IST
Last Updated 3 ಏಪ್ರಿಲ್ 2018, 7:26 IST
ಡಾ.ಜಿ.ಪರಮೇಶ್ವರ (ಸಂಗ್ರಹ ಚಿತ್ರ)
ಡಾ.ಜಿ.ಪರಮೇಶ್ವರ (ಸಂಗ್ರಹ ಚಿತ್ರ)   

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಯಾರೇ ರಾಜ್ಯಕ್ಕೆ ಬಂದರೂ ಪ್ರಯೋಜನವಾಗದು. ಅದೇ ರೀತಿ, ಜೆಡಿಎಎಸ್‌ನ ಎಚ್.ಡಿ. ಕುಮಾರಸ್ವಾಮಿ ಮತ್ತು ದೇವೇಗೌಡರೂ ಪ್ರಭಾವ ಬೀರಲಾರರು. ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ನಮ್ಮ ಮೊದಲ ಆದ್ಯತೆ. ಆಮೇಲೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚಿಸುತ್ತೇವೆ’ ಎಂದು ಅವರು ಹೇಳಿದರು.

ಟಿಕೆಟ್ ಹಂಚಿಕೆ ಬಗ್ಗೆ ಗೊಂದಲ ಬೇಡ: ಟಿಕೆಟ್ ಹಂಚಿಕೆ ಬಗ್ಗೆ ಯಾರೂ ಗೊಂದಲಕ್ಕೊಳಗಾಗುವುದು ಬೇಡ. ಆ ಕುರಿತು ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದು ಪರಮೇಶ್ವರ ಹೇಳಿದರು.

ADVERTISEMENT

ಅಶೋಕ್ ಖೇಣಿಗೆ ಪಕ್ಷ ಟಿಕೆಟ್‌ ನೀಡಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನನಗೇ ಇನ್ನೂ ಟಿಕೆಟ್‌ ಖಚಿತವಾಗಿಲ್ಲ. ಇನ್ನು ಬೇರೆಯವರ ಬಗ್ಗೆ ನಾನು ಹೇಗೆ ಹೇಳಲಿ’ ಎಂದು ಮರುಪ್ರಶ್ನೆ ಹಾಕಿದರು.

ಮುಖ್ಯಮಂತ್ರಿ ಕ್ಷೇತ್ರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿ ಪ್ರಶ್ನಿಸಿದ ಸುದ್ದಿಗಾರರನ್ನೇ, ‘ಹಾಗೆಂದು ನಿಮಗೆ ಯಾರು ಹೇಳಿದ್ದು’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.