ADVERTISEMENT

ರಾಜ್ಯದಲ್ಲಿ ಸಿಡಿಲಿಗೆ 6 ಬಲಿ

​ಪ್ರಜಾವಾಣಿ ವಾರ್ತೆ
Published 5 ಮೇ 2014, 19:30 IST
Last Updated 5 ಮೇ 2014, 19:30 IST
ಎಚ್‌.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾರಕ ಎಡದಂಡೆ ನಾಲೆಯ ಏರಿ ಕುಸಿದಿದೆ
ಎಚ್‌.ಡಿ. ಕೋಟೆ ತಾಲ್ಲೂಕಿನ ಬೂದನೂರು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾರಕ ಎಡದಂಡೆ ನಾಲೆಯ ಏರಿ ಕುಸಿದಿದೆ   

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಮತ್ತು ಸೋಮವಾರ  ಬಿರುಗಾಳಿ ಸಹಿತ ಮಳೆಯಾಗಿದೆ. ಪ್ರತ್ಯೇಕ ಘಟನೆ­ಗಳಲ್ಲಿ ಸಿಡಿಲು ಬಡಿದು ತಂದೆ, ಮಗ ಸೇರಿ  4 ಜನ ಮೃತ­ಪಟ್ಟಿದ್ದಾರೆ. ಇದಲ್ಲದೆ ಮಹಾರಾಷ್ಟ್ರದ ಟಾಕಳಿಯಲ್ಲಿ ಸಿಡಿಲಿಗೆ ಕರ್ನಾಟಕದ ಇಬ್ಬರು ಬಲಿಯಾಗಿದ್ದಾರೆ.

ಮೈಸೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅಪಾರ ಆಸ್ತಿಪಾಸ್ತಿ ಹಾನಿ ಸಂಭವಿಸಿದೆ. ಎಚ್‌.ಡಿ. ಕೋಟೆ ತಾಲ್ಲೂಕಿನಲ್ಲಿ ಮಳೆ­ಯಿಂದ ರೂ.5 ಕೋಟಿಗೂ ಹೆಚ್ಚು ಹಾನಿ ಸಂಭವಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ, ಉಪ್ಪಿನಂಗಡಿ, ಪುತ್ತೂರು ಸಹಿತ ವಿವಿಧ ಭಾಗಗಳಲ್ಲಿ ಸೋಮವಾರವೂ ಸಿಡಿಲು, ಬಿರು­ಗಾಳಿ ಸಹಿತ ಭಾರಿ ಮಳೆ ಸುರಿದಿದೆ. ಅಡಿಕೆ, ತೆಂಗಿನ ಮರಗಳು ಮುರಿದು ಬಿದ್ದುದರಿಂದ ಕೃಷಿಕರು ಕಂಗಾಲಾಗಿದ್ದಾರೆ. ಬಾಗಲಕೋಟೆ, ಉತ್ತರ ಕನ್ನಡ. ಗದಗ, ಧಾರವಾಡ ಜಿಲ್ಲೆಗಳಲ್ಲಿ ಹಲವು ಕಡೆ ಮಳೆ ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.