ADVERTISEMENT

ರಾಜ್ಯದ ಪಶ್ಚಿಮದಲ್ಲಿ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಬೆಂಗಳೂರು: ರಾಜ್ಯದಲ್ಲಿ ಮುಂಗಾರುಪೂರ್ವ ಮಳೆ ಉತ್ತಮವಾಗಿ ಆಗುತ್ತಿದ್ದು, ಇನ್ನೂ ಮೂರು ದಿನಗಳು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಗಳವಾರ ರಾಜ್ಯದ ಪಶ್ಚಿಮ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್‌. ಶ್ರೀನಿವಾಸ ರೆಡ್ಡಿ ತಿಳಿಸಿದರು.

ಸೋಮವಾರ ದಕ್ಷಿಣ ಒಳನಾಡು ಪ್ರದೇಶಗಳಾದ ಕೊಡಗು, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ದಾವಣಗೆರೆ, ಬೆಂಗಳೂರು ಹಾಗೂ ಸುತ್ತಮುತ್ತಲ ಭಾಗಗಳಲ್ಲಿ ಮಳೆಯಾಗಿದೆ. ಭಾನುವಾರ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಭಾರಿ ಮಳೆ ಸುರಿದಿದೆ ಎಂದು ವಿವರಿಸಿದರು.

ADVERTISEMENT

ವಾಯುಭಾರ ಕುಸಿತ ದೇಶದ ಕೇಂದ್ರ ಭಾಗಗಳಿಂದ ದಕ್ಷಿಣ ಕೊಂಕಣ ಪ್ರದೇಶಗಳತ್ತ ಚಲಿಸುತ್ತಿದೆ. ಪೂರ್ವದಿಂದ ಜೋರಾದ ಗಾಳಿ ಬೀಸುತ್ತಿದ್ದು, ತಮಿಳುನಾಡು, ಕರ್ನಾಟಕ, ಕೇರಳದಲ್ಲಿ ವರ್ಷಧಾರೆಯಾಗುತ್ತಿದೆ. ಕನಿಷ್ಠ ತಾಪಮಾನದಲ್ಲೂ ಇಳಿಕೆಯಾಗಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.