ADVERTISEMENT

ರಾಜ್ಯದ ಮೊದಲ ‘ಸಖಿ’ ಕೇಂದ್ರ ಉದ್ಘಾಟನೆ

ಸಮಾಜ ಶೋಷಿತ ಮಹಿಳೆಯನ್ನು ದೋಷಿಯಂತೆ ಕಾಣುತ್ತದೆ: ಮೇನಕಾ ಗಾಂಧಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2018, 19:30 IST
Last Updated 5 ಮಾರ್ಚ್ 2018, 19:30 IST
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಅವರು ‘ಸಖಿ’ ಕೇಂದ್ರವನ್ನು ಉದ್ಘಾಟಿಸಿದರು. ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಪ್ರಮೋದ್ ಮಧ್ವರಾಜ್ ಇದ್ದಾರೆ --ಪ್ರಜಾವಾಣಿ ಚಿತ್ರ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮನೇಕಾ ಗಾಂಧಿ ಅವರು ‘ಸಖಿ’ ಕೇಂದ್ರವನ್ನು ಉದ್ಘಾಟಿಸಿದರು. ಸಂಸದೆ ಶೋಭಾ ಕರಂದ್ಲಾಜೆ, ಸಚಿವ ಪ್ರಮೋದ್ ಮಧ್ವರಾಜ್ ಇದ್ದಾರೆ --ಪ್ರಜಾವಾಣಿ ಚಿತ್ರ   

ಉಡುಪಿ: ಕುಟುಂಬ ಹಾಗೂ ಸಮಾಜದಿಂದ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಸಹಾಯ ಮತ್ತು ಬೆಂಬಲ ನೀಡಲು ಎಲ್ಲ ರಾಜ್ಯಗಳಲ್ಲಿ ‘ಸಖಿ’ (ಒನ್‌ ಸ್ಟಾಪ್‌ ಸೆಂಟರ್‌) ಕೇಂದ್ರ ತೆರೆಯಲಾಗುವುದು ಎಂದು ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮೇನಕಾ ಗಾಂಧಿ ಹೇಳಿದರು.

ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ಸಕಲ ನೆರವನ್ನು ಒಂದೇ ಸೂರಿನಡಿ ನೀಡುವ ‘ಸಖಿ’ ಕೇಂದ್ರವನ್ನು ಸೋಮವಾರ ಇಲ್ಲಿ ಉದ್ಘಾಟಿಸಿ ಮಾತನಾಡಿದರು. ‘ಮಹಿಳೆಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲ ರೀತಿಯ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ. ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಸಖಿ ಕೇಂದ್ರದ ಸಹಾಯವಾಣಿ 181ಕ್ಕೆ ಕರೆ ಮಾಡುವ ಮೂಲಕ ಪ್ರಕರಣವನ್ನು ನೋಂದಣಿ ಮಾಡಬಹುದು. ಅವರು ಇರುವ ಸ್ಥಳದಲ್ಲೇ ಆಂಬುಲೆನ್ಸ್ ಸಹಿತ ಸಿಬ್ಬಂದಿಯನ್ನು ಕಳುಹಿಸಿ ರಕ್ಷಣೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಅವರಿಗೆ ಅಗತ್ಯವಿರುವ ವೈದ್ಯಕೀಯ ಚಿಕಿತ್ಸೆ, ಪೊಲೀಸ್‌ ರಕ್ಷಣೆ, ಕಾನೂನು ಸೇವೆ, ಸಮಾಲೋಚನೆ ಹಾಗೂ ತಾತ್ಕಾಲಿಕ ಆಶ್ರಯವನ್ನು ಒದಗಿಸಲಾಗುತ್ತದೆ’ ಎಂದರು ತಿಳಿಸಿದರು.

‘ಈಗಾಗಲೇ 171 ಕೇಂದ್ರಗಳನ್ನು ತೆರೆಯಲಾಗಿದೆ. ಕರ್ನಾಟಕದಲ್ಲಿ ದಾವಣಗೆರೆ, ಚಿತ್ರದುರ್ಗ, ಚಾಮರಾಜ ನಗರ, ತುಮಕೂರು, ಬಾಗಲಕೋಟೆ
ಯಲ್ಲಿ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.