ADVERTISEMENT

ರಾಜ್ಯಪಾಲರ ಬೆಂಬಲ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2012, 19:30 IST
Last Updated 5 ಅಕ್ಟೋಬರ್ 2012, 19:30 IST

ಬೆಂಗಳೂರು: `ಕಾವೇರಿ ನದಿ ನೀರಿನ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ನನ್ನ ಸಂಪೂರ್ಣ ಬೆಂಬಲವಿದೆ~ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಹೇಳಿದರು.

ರಾಜಭವನದ ಗಾಜಿನಮನೆಯಲ್ಲಿ ಶುಕ್ರವಾರ ನಡೆದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಕಾವೇರಿ ನದಿ ನೀರು ಪ್ರಾಧಿಕಾರ ಹಾಗೂ ಸುಪ್ರೀಂಕೋರ್ಟ್‌ನ ನಿರ್ದೇಶನದಂತೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡುತ್ತಿದೆ. ಇದರಲ್ಲಿ ರಾಜ್ಯ ಸರ್ಕಾರದ ತಪ್ಪೇನೂ ಇಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯಸರ್ಕಾರದ ವಕೀಲರು ಸಮರ್ಥವಾಗಿ ವಾದ ಮಂಡಿಸಿಲ್ಲ ಎಂಬುದು ತಪ್ಪು ತಿಳಿವಳಿಕೆ. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮುಂದೆ ಯಾವುದೇ ನಿಲುವು ತೆಗೆದುಕೊಂಡರೂ ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ~ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.