ADVERTISEMENT

ರಾಜ್ಯವನ್ನು ಲೂಟಿ ಮಾಡುತ್ತಿರುವ ಸಿದ್ದರಾಮಯ್ಯ: ಯಡಿಯೂರಪ್ಪ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2017, 5:05 IST
Last Updated 12 ನವೆಂಬರ್ 2017, 5:05 IST
ಪತ್ರಿಕಾಗೋಷ್ಠಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ಸಂಸದ ನಳಿನ್‌ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಇತರರು ಇದ್ದರು. –ಪ್ರಜಾವಾಣಿ ಚಿತ್ರ
ಪತ್ರಿಕಾಗೋಷ್ಠಿಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿದರು. ಸಂಸದ ನಳಿನ್‌ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಇತರರು ಇದ್ದರು. –ಪ್ರಜಾವಾಣಿ ಚಿತ್ರ   

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಕುರಿತು ಸಿಬಿಐ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಆದೇಶಿಸಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸವಾಲೆಸೆದರು.

ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಬಹಿರಂಗಪಡಿಸಲಿದೆ. ಭ್ರಷ್ಟಾಚಾರಿ ಸಿದ್ದರಾಮಯ್ಯ ಮತ್ತು ಅತ್ಯಾಚಾರಿ‌ ಕೆ.ಸಿ. ವೇಣುಗೋಪಾಲ್ ಸೇರಿಕೊಂಡು ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಕರಾವಳಿಯಲ್ಲಿ ಕೇರಳದ ಮಾದರಿಯ ಕೊಲೆಗಡುಕ ರಾಜಕೀಯ ಆರಂಭವಾಗಿದೆ. ಭಯೋತ್ಪಾದಕ ಸಂಘಟನೆಗಳಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೂರು ತಿಂಗಳೊಳಗೆ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಕಚೇರಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.