ಬೆಂಗಳೂರು: ವಿಧಾನಸಭೆಯಿಂದ ರಾಜ್ಯಸಭೆಯ ಒಂದು ಸ್ಥಾನಕ್ಕೆ ಇದೇ 3ರಂದು ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಂಗಳವಾರ ಸಂಜೆ ನಡೆಯಿತು. ಸಭೆಯಲ್ಲಿ ನಟಿ ಹೇಮಾಮಾಲಿನಿ ಕೂಡ ಹಾಜರಿದ್ದು, ಮತಯಾಚನೆ ಮಾಡಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಇತರ ಮುಖಂಡರು ಹಾಜರಿದ್ದರು. ‘ನಮ್ಮ ಅಭ್ಯರ್ಥಿ ಹೇಮಾಮಾಲಿನಿ ಅವರು ಗೆಲ್ಲುವ ಪೂರ್ಣ ವಿಶ್ವಾಸ ಇದೆ’ ಎಂದು ಯಡಿಯೂರಪ್ಪ ಹೇಳಿದರು.
ಈ ನಡುವೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಪಕ್ಷೇತರ ಅಭ್ಯರ್ಥಿ ಪ್ರೊ ಕೆ.ಮರುಳಸಿದ್ದಪ್ಪ ಅವರಿಗೆ ಮತ ಚಲಾಯಿಸುವಂತೆ ತಮ್ಮ ಎಲ್ಲ ಶಾಸಕರಿಗೆ ವಿಪ್ ಜಾರಿ ಮಾಡಿದ್ದಾರೆ. ಜೆಡಿಎಸ್ ಕೂಡ ಮರುಳಸಿದ್ದಪ್ಪ ಅವರನ್ನು ಬೆಂಬಲಿಸಿದ್ದು, ವಿಪ್ ಜಾರಿ ಮಾಡುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.