ADVERTISEMENT

ರಾಜ್ಯಸಭಾ ಸದಸ್ಯ ಸಂಜಯ ರಾವುತ್‌ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 19:30 IST
Last Updated 30 ಮಾರ್ಚ್ 2018, 19:30 IST

ಬೆಳಗಾವಿ: ‘ಕರ್ನಾಟಕದವರು ಮಹಾರಾಷ್ಟ್ರದ ಒಂದು ಬಸ್ಸಿಗೆ ಬೆಂಕಿ ಹಚ್ಚಿದರೆ ಮಹಾರಾಷ್ಟ್ರಕ್ಕೆ ಬರುವ ಕರ್ನಾಟಕದ 10 ಬಸ್ಸುಗಳಿಗೆ ನಾವು ಬೆಂಕಿ ಹಚ್ಚುತ್ತೇವೆ’ ಎಂದು ಹೇಳಿಕೆ ನೀಡಿದ್ದ ರಾಜ್ಯಸಭಾ ಸದಸ್ಯ, ಶಿವಸೇನೆಯ ಮುಖಂಡ ಸಂಜಯ ರಾವುತ್‌ ವಿರುದ್ಧ ಇಲ್ಲಿನ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಶುಕ್ರವಾರ ಸಂಜೆ ಪ್ರಕರಣ ದಾಖಲಾಗಿದೆ.

ಟಿಳಕವಾಡಿ ವ್ಯಾಪ್ತಿಯ ಮಂಗಲ ಕಾರ್ಯಾಲಯದಲ್ಲಿ ಗುರುವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಅವರು ಪ್ರಚೋದನಾಕಾರಿಯಾಗಿ ಮಾಡಿದ ಭಾಷಣ, ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಕ್ಕಾಗಿ ಹಾಗೂ ದ್ವೇಷ ಭಾವನೆ ಮೂಡಿಸಲು ಪ್ರಯತ್ನಿಸಿದ್ದಕ್ಕಾಗಿ ಭಾಷಣದ ವಿಡಿಯೊ ಆಧಾರಿಸಿ, ಸಂಜಯ

ADVERTISEMENT

ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಡಿ.ಸಿ. ರಾಜಪ್ಪ ಅವರು ತಿಳಿಸಿದರು.

ಕಾರ್ಯಕ್ರಮ ಆಯೋಜಿಸಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮುಖಂಡ ಕಿರಣ್‌ ಠಾಕೂರ್‌, ಪ್ರಕಾಶ ಬೆಳಗೋಜಿ ಹಾಗೂ ಮಂಗಲ ಕಾರ್ಯಾಲಯದ ಮಾಲೀಕ ಎಸ್‌.ಆರ್‌. ನಾಯಕ ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.