ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಮೌಂಟೆನ್ ವ್ಯೂ ಶಾಲೆ ಸಂಸ್ಥಾಪಕಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಅಜ್ರಾ (76) ಗುರುವಾರ ಬೆಳಿಗ್ಗೆ ನಿಧನರಾದರು.
ಅಜ್ರಾ ಅನೇಕ ವರ್ಷಗಳಿಂದ ಮೌಂಟೆನ್ ವ್ಯೂ ಶಿಕ್ಷಣ ಸಂಸ್ಥೆಯ ಆಧಾರಸ್ತಂಭವಾಗಿ ಅದನ್ನು ಬೆಳೆಸಿದ್ದರು. ಆ ಸಂಸ್ಥೆಯ ಪ್ರಾಂಶುಪಾಲರಾಗಿ ಹಾಗೂ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.ಅವರು ಶಿಕ್ಷಣ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿ ಕುವೆಂಪು ವಿಶ್ವವಿದ್ಯಾನಿಲಯ ಅವರಿಗೆ 2012ರಲ್ಲಿ ಡಾಕ್ಟರೇಟ್ ನೀಡಿ ಗೌರವಿಸಿದೆ.
ಅಜ್ರಾ ಅವರಿಗೆ ಮೌಂಟೆನ್ ವ್ಯೂ ಶಾಲೆಯ ಕಾರ್ಯದರ್ಶಿಯಾಗಿರುವ ಪುತ್ರಿ ಹಬೀಬಾ ಎನ್. ಪಾಷಾ ಹಾಗೂ ಅಳಿಯ ನಿಸಾರ್ ಪಾಷಾ ಇದ್ದಾರೆ. ಅಜ್ರಾ ಅವರ ಅಂತ್ಯಕ್ರಿಯೆ ರಾಮನಹಳ್ಳಿ ಖಬರಸ್ಥಾನದಲ್ಲಿ ಗುರುವಾರ ಸಂಜೆ ನೆರವೇರಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.