ADVERTISEMENT

ರಾಜ್ಯ ಯೋಜನಾ ಮಂಡಳಿಗೆ ಸದಸ್ಯರ ನೇಮಕ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2012, 19:30 IST
Last Updated 4 ಫೆಬ್ರುವರಿ 2012, 19:30 IST

ಬೆಂಗಳೂರು: ರಾಜ್ಯ ಯೋಜನಾ ಮಂಡಳಿಯ ಅಧಿಕಾರೇತರ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜೆ.ಎಸ್.ಎಸ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ. ಎಂ.ಮಹದೇವಪ್ಪ, ಇನ್‌ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಚ್. ಪಿ.ಖಿಂಚ, ನಿವೃತ್ತ ಐಎಎಸ್ ಅಧಿಕಾರಿ ಡಾ ಟಿ.ಆರ್.ರಘುನಂದನ್, ಜಸ್ಟಿಸ್ ಕೆ.ಎಸ್.ಹೆಗ್ಡೆ ಇನ್‌ಸ್ಟಿಟ್ಯೂಟ್ ಆಫ್ ಮ್ಯೋನೇಜ್‌ಮೆಂಟ್‌ನ ಪ್ರೊ.ಜಿ.ವಿ.ಜೋಷಿ, ಅರ್ಥಶಾಸ್ತ್ರದ ನಿವೃತ್ತ ಪ್ರಾಧ್ಯಾಪಕ ಎಂ.ಸಿ.ಕೊಡ್ಲಿ, ಡಾ.ವೈ.ಎ.ದೇವಪಾಲ್, ಸಿ.ಆರ್.ನಜೀರ್ ಅಹಮದ್, ರವಿಕುಮಾರ್ ಕೆ.ಪಟೇಲ್, ಬಿ.ಆರ್.ಜಯಂತ್, ಜೆ.ಆರ್.ಬಂಗೇರಾ, ಎಂ.ಭಾರದ್ವಾಜ್ ಹಾಗೂ  ಡಾ.ಎಸ್.ಶ್ರೀನಿಧಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ಯೋಜನಾ ಮಂಡಳಿ ಉಪಾಧ್ಯಕ್ಷರಾಗಿ ವಿಧಾನ ಪರಿಷತ್ ಸದಸ್ಯ ರಾಮಚಂದ್ರಗೌಡ ಕೆಲಸ ನಿರ್ವಹಿಸುತ್ತಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.