ADVERTISEMENT

ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 19:42 IST
Last Updated 2 ಏಪ್ರಿಲ್ 2018, 19:42 IST
ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌
ರಾಜ್ಯ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌   

ನವದೆಹಲಿ: ‘ರಕ್ತಚಂದನದ ತುಂಡುಗಳನ್ನು ಅಕ್ರಮವಾಗಿ ಸಂಗ್ರಹಿಸಿದ್ದ ವ್ಯಕ್ತಿಯೊಬ್ಬನನ್ನು ಕರ್ನಾಟಕ ಅರಣ್ಯ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಬಂಧಿಸಬಹುದೇ’ ಎಂಬ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿ ಸುಪ್ರೀಂ ಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಕಳೆದ ವರ್ಷ ಬಳ್ಳಾರಿಯ ಹೊರ ವಲಯದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ರಕ್ತಚಂದನದ ತುಂಡುಗಳನ್ನು ವಶಪಡಿಸಿಕೊಂಡು ಗ್ರಾಮೀಣ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣದ ಪ್ರಮುಖ ಆರೋಪಿ ಅಬ್ದುಲ್‌ ನಯೀಮ್‌ ಅಲಿಯಾಸ್‌ ನಯೀಮ್‌ ಅಹಮದ್‌ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎ.ಕೆ. ಸಿಕ್ರಿ ನೇತೃತ್ವದ ಪೀಠ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣ ಸಂಬಂಧ ಮುಂದಿನ ವಿಚಾರಣೆ ವೇಳೆ ಸರ್ಕಾರ ಪ್ರತಿಕ್ರಿಯೆ ನೀಡಬೇಕು. ಅಲ್ಲಿವರೆಗೆ ಆರೋಪಿಯನ್ನು ಬಂಧಿಸಕೂಡದು ಎಂದು ಸೂಚಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ಕಳೆದ ಜನವರಿ 23ರಂದು ನೀಡಿದ್ದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.