ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಇದಕ್ಕಿಂತ ಕಠಿಣ ಪದ ಬಳಸಬೇಕು

ಷಂಡ ಪದಕ್ಕೆ ಸಾಂಸ್ಕೃತಿಕ ಹಿನ್ನೆಲೆ ಇದೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2017, 19:30 IST
Last Updated 13 ಜುಲೈ 2017, 19:30 IST
ರಾಜ್ಯ ಸರ್ಕಾರದ ವಿರುದ್ಧ ಇದಕ್ಕಿಂತ ಕಠಿಣ ಪದ ಬಳಸಬೇಕು
ರಾಜ್ಯ ಸರ್ಕಾರದ ವಿರುದ್ಧ ಇದಕ್ಕಿಂತ ಕಠಿಣ ಪದ ಬಳಸಬೇಕು   

ಬೆಂಗಳೂರು: ‘ಈ ರಾಜ್ಯ ಸರ್ಕಾರಕ್ಕೆ ಷಂಡ ಪದಕ್ಕಿಂತಲೂ ಕಠಿಣ ಪದ ಬಳಸಬೇಕು’ ಎಂದು ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜತೆ ಗುರುವಾರ ಮಾತನಾಡಿದ ಅವರು, ‘ಷಂಡ ಎಂಬ ಪದಕ್ಕೆ ಉತ್ತರ ಕರ್ನಾಟಕದಲ್ಲಿ ಸಾಂಸ್ಕೃತಿಕ ಹಿನ್ನೆಲೆ ಇದೆ’ ಎಂದೂ ಅವರು ಪ್ರತಿಪಾದಿಸಿದರು.

‘ಕೈಲಾಗದವರನ್ನು ಉದ್ದೇಶಿಸಿ ಮಾತನಾಡುವಾಗ ಇವನಿಗೆ ಗಂಡಸ್ತನ ಇದೆಯೇ ಎಂದು ನಮ್ಮ ಕಡೆ  ಕೇಳುತ್ತಾರೆ. ಈ ಸರ್ಕಾರದ ನಡವಳಿಕೆ ನೋಡಿ ಅದೇ ರೀತಿ ಹೇಳಿದ್ದಾರೆ’ ಎಂದು ಅವರು ಹೇಳಿದರು.

ADVERTISEMENT

ಶ್ವೇತಪತ್ರಕ್ಕೆ ಆಗ್ರಹ: ‘ರಾಜ್ಯದಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣಗಳ ಬಗ್ಗೆ ನಾಲ್ಕು ವರ್ಷಗಳಿಂದ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ಶ್ವೇತಪತ್ರ ಹೊರಡಿಸಬೇಕು’ ಎಂದು ಶೆಟ್ಟರ್‌ ಆಗ್ರಹಿಸಿದರು.

‘ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ  ಬೆಂಗಳೂರಿನಿಂದ ಬಳ್ಳಾರಿಯವರೆಗೆ ಪಾದಯಾತ್ರೆ ನಡೆಸಿದ್ದರು. ತಾವು ಅಧಿಕಾರಕ್ಕೆ ಬಂದರೆ,  ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದವರನ್ನು ಜೈಲಿಗೆ ಕಳುಹಿಸುವುದಾಗಿ ಹೇಳಿದ್ದರು. ಈವರೆಗೂ ಯಾರನ್ನೂ ಜೈಲಿಗೆ ಕಳುಹಿಸಿಲ್ಲ’ ಎಂದು ಅವರು ಟೀಕಿಸಿದರು.

‘ಲೋಕಾಯುಕ್ತ ತನಿಖೆ ವ್ಯಾಪ್ತಿಯಲ್ಲಿದ್ದ ಅಕ್ರಮ ಗಣಿಗಾರಿಕೆ ಪ್ರಕರಣದ ತನಿಖೆಯನ್ನು  ವಿಶೇಷ ತನಿಖಾ ದಳಕ್ಕೆ ವಹಿಸಿರುವುದು ಬೆದರಿಸುವ ತಂತ್ರವಷ್ಟೆ.  ಇದರಿಂದ ನಿಷ್ಪಕ್ಷಪಾತ ತನಿಖೆ ನಡೆಯುವುದಿಲ್ಲ’ ಎಂದು ಶೆಟ್ಟರ್‌ ಹೇಳಿದರು.

* ಷಂಡ ಪದ ಸಂಸದೀಯ ಪದವೋ ಅಸಂಸದೀಯ ಪದವೋ ಎಂಬ ಬಗ್ಗೆ ಚರ್ಚೆ ನಡೆಯಲಿ

-ಜಗದೀಶ ಶೆಟ್ಟರ್‌, ವಿರೋಧ ಪಕ್ಷದ ನಾಯಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.