ADVERTISEMENT

ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬ: ವಿಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ಭಾಷಣ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2018, 7:31 IST
Last Updated 4 ಮಾರ್ಚ್ 2018, 7:31 IST
ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬ: ವಿಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ಭಾಷಣ
ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬ: ವಿಡಿಯೊ ಕಾನ್ಫರೆನ್ಸ್ ಮೂಲಕ ಮೋದಿ ಭಾಷಣ   

ತುಮಕೂರು: ರಾಮಕೃಷ್ಣ ವಿವೇಕಾನಂದ ಆಶ್ರಮದ ರಜತಯಾನ ಬೆಳ್ಳಿ ಹಬ್ಬದ ಸಮಾರೋಪ ಕಾರ್ಯಕ್ರಮದ ಪ್ರಯುಕ್ತ  ಬಾನುವಾರ ಆಯೋಜಿಸಿದ್ದ ಯುವಶಕ್ತಿ ಆಸ್ಪೋಟನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.

ಸುಮಾರು 20 ನಿಮಿಷ ಭಾಷಣ ಮಾಡಿದರು. ಭಾಷಣದಲ್ಲಿ ಯುವಕರು ಮತ್ತು ರಾಮಕೃಷ್ಣ ವಿವೇಕಾನಂದ ಆಶ್ರಮದ ಭಕ್ತರನ್ನು ಉದ್ದೇಶಿಸಿ ಮಾತನಾಡಿದರು.

ಕನ್ನಡದಲ್ಲಿ ಭಾಷಣ ಆರಂಭಿಸಿದ ಮೋದಿ ಸಿದ್ಧಗಂಗಾ ಸ್ಮಾಮೀಜಿ ಅವರ ಶಿಕ್ಷಣ ಸೇವೆಯನ್ನು ಶ್ಲಾಘಿಸಿದರು. ರಾಮಕೃಷ್ಣ ಪರಮಹಂಸರು ಹಾಗೂ ವಿವೇಕಾನಂದರ ದಾರಿಯಲ್ಲಿ ಸಿದ್ಧಗಂಗಾ ಸ್ವಾಮೀಜಿಯವರು ರಾಷ್ಟ್ರನಿರ್ಮಾಣ ಕೆಲಸದಲ್ಲಿ ತೊಡಗಿದ್ದಾರೆ ಎಂದರು.

ADVERTISEMENT

ಕಾರ್ಯಕ್ರಮಕ್ಕೆ ಖುದ್ದು ಹಾಜರಾಗುವ ಇಚ್ಛೆ ಇತ್ತು. ಆದರೆ ಅಧಿವೇಶನ ಇರುವುದರಿಂದ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.