ADVERTISEMENT

ರಾಮನಗರದಾದ್ಯಂತ ರಾತ್ರಿ ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು, ಇಕ್ಕಟ್ಟಿನಲ್ಲಿ ಪ್ರಯಾಣಿಕರು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2017, 18:11 IST
Last Updated 8 ಅಕ್ಟೋಬರ್ 2017, 18:11 IST
ರಾಮನಗರದಾದ್ಯಂತ ರಾತ್ರಿ ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು, ಇಕ್ಕಟ್ಟಿನಲ್ಲಿ ಪ್ರಯಾಣಿಕರು
ರಾಮನಗರದಾದ್ಯಂತ ರಾತ್ರಿ ಭಾರಿ ಮಳೆ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನೀರು, ಇಕ್ಕಟ್ಟಿನಲ್ಲಿ ಪ್ರಯಾಣಿಕರು   

ರಾಮನಗರ: ಜಿಲ್ಲೆಯಾದ್ಯಂತ ಭಾನುವಾರ ರಾತ್ರಿ ವರುಣ ಆರ್ಭಟಿಸಿದ್ದು ವ್ಯಾಪಕ ಮಳೆಯಾಗಿದೆ.

ರಾಮನಗರ, ಚನ್ನಪಟ್ಟಣ ಹಾಗೂ ಕನಕಪುರದಲ್ಲಿ ರಾತ್ರಿ ಮಳೆ ಚುರುಕಾಗಿದೆ. ರಾಮನಗರದ ಜಿಲ್ಲಾಧಿಕಾರಿ ನಿವಾಸದ ಎದುರು ಹೆದ್ದಾರಿಯಲ್ಲಿ ಮೂರ್ನಾಲ್ಕು ಅಡಿ ಎತ್ತರಕ್ಕೆ ನೀರು ಹರಿಯುತ್ತಿದೆ.

ರಾಮನಗರದ ಜಾನಪದ ಲೋಕದ ಬಳಿ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಮಳೆ ನೀರು ಹರಿದಿರುವುದು.

ADVERTISEMENT

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನದಿಯಂತೆ ಮಳೆ ನೀರು ಹರಿಯುತ್ತಿದೆ. ಇದರಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ. ವಾರಾಂತ್ಯದ ರಜೆ ಮುಗಿಸಿ ಬೆಂಗಳೂರಿಗೆ ಮರಳುತ್ತಿರುವವರು ಇಕ್ಕಟ್ಟಿಗೆ ಸಿಲುಕಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ವಂದಾರಗುಪ್ಪೆಯಲ್ಲಿ 66 ಮಿಲಿಮೀಟರ್ ಹಾಗೂ ಕನಕಪುರ ತಾಲ್ಲೂಕಿನ ಕೊಳಕೊಂಡನಹಳ್ಳಿ ವ್ಯಾಪ್ತಿಯಲ್ಲಿ 88 ಮಿಲಿಮೀಟರ್ ಮಳೆ ಪ್ರಮಾಣ ದಾಖಲಾಗಿದೆ. ಮಳೆಯ ನೀರಿನಿಂದಾಗಿ ನದಿಗಳು, ಹಳ್ಳಗಳು ತುಂಬಿ ಹರಿಯುತ್ತಿವೆ. ಕೆಳ ಹಂತದ ಸೇತುವೆಗಳಲ್ಲಿ ನೀರು ಹರಿಯುತ್ತಿದ್ದು, ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.