ADVERTISEMENT

ರಾಯಣ್ಣ ಬ್ರಿಗೇಡ್ ಅಧ್ಯಕ್ಷ ವಿರೂಪಾಕ್ಷಪ್ಪ, ಮಾಜಿ ಸಂಸದ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 8:32 IST
Last Updated 25 ಏಪ್ರಿಲ್ 2018, 8:32 IST
ವಿರೂಪಾಕ್ಷಪ್ಪ (ಸಂಗ್ರಹ ಚಿತ್ರ)
ವಿರೂಪಾಕ್ಷಪ್ಪ (ಸಂಗ್ರಹ ಚಿತ್ರ)   

ಬೆಂಗಳೂರು: ರಾಯಣ್ಣ ಬ್ರಿಗೇಡ್ ಅಧ್ಯಕ್ಷ ವಿರೂಪಾಕ್ಷಪ್ಪ ಮತ್ತು ಕೊಪ್ಪಳ ಬಿಜೆಪಿ ಮಾಜಿ ಸಂಸದ ಶಿವರಾಮೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಯಾದರು.

‘ಹಿಂದುಳಿದ ವರ್ಗದವರಿಗೆ ಬಿಜೆಪಿಯಲ್ಲಿ ಉಳಿಗಾಲವಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಅವರು ಮೈಯಲ್ಲಿ ವಿಷ ತುಂಬಿಕೊಂಡಿದ್ದಾರೆ. ಈಶ್ವರಪ್ಪ ನಮ್ಮನ್ನು ಕೈ ಬಿಟ್ಟಿದ್ದಾರೆ. ಅವರೇನು ಅಂತ ನಿಮಗೇ ಗೊತ್ತಿದೆ. ನಾನು ಆಸೆ ಇಟ್ಟುಕೊಂಡಿದ್ದು ಅಲ್ಲಿ ಸಿಗಲಿಲ್ಲ. ಅದಕ್ಕೆ ಕಾಂಗ್ರೆಸ್ ಸೇರಿದ್ದೇನೆ’ ಎಂದು ವಿರೂಪಾಕ್ಷಪ್ಪ ಹೇಳಿದರು.

ನಾನು ಬ್ರಿಗೇಡ್‌ಗೆ, ಬಿಜೆಪಿಗೆ ಕೈಕೊಟ್ಟಿಲ್ಲ. ಬಿಜೆಪಿಯವರೇ ನನ್ನ ಕೈಬಿಟ್ಟಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.