ADVERTISEMENT

ರಾಹುಲ್‌ಗೆ ನೈತಿಕ ಹಕ್ಕಿಲ್ಲ: ಜೋಶಿ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2013, 19:59 IST
Last Updated 24 ಏಪ್ರಿಲ್ 2013, 19:59 IST

ಬೆಳಗಾವಿ: `ಬಿಜೆಪಿಯನ್ನು ಟೀಕಿಸಲು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ನೈತಿಕ ಹಕ್ಕು ಇಲ್ಲ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಹೇಳಿದರು.`ರಾಜ್ಯದ ಸ್ಥಿತಿಗತಿ ಗೊತ್ತಿಲ್ಲದವರು  ಬರೆದು ಕೊಡುವ ಭಾಷಣವನ್ನು ಓದುವ ಅವರು, ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡಿದ್ದನ್ನು ಹಾಗೂ ಬಿಜೆಪಿಯವರು ಲೂಟಿಕೋರರು ಎಂದು ಹೇಳಿರುವುದನ್ನು ಖಂಡಿಸುತ್ತೇವೆ' ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

`ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕತೆ ಇಲ್ಲ. ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 2ಜಿ ತರಂಗಾಂತರ ಸೇರಿದಂತೆ ಹಲವಾರು ಹಗರಣಗಳಲ್ಲಿ ಭಾಗಿಯಾಗಿದೆ. ರಾಹುಲ್ ನೀಡಿರುವ ಹೇಳಿಕೆಯು ಭೂತದ ಬಾಯಿಯಲ್ಲಿ ಭಗವದ್ಗೀತೆ ಹೇಳಿಸಿದಂತಾಗಿದೆ' ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.