ADVERTISEMENT

‘ರಾಹುಲ್‌ ಗಾಂಧಿಯೇ ಗುರು ಎಂದರೂ ಅಚ್ಚರಿಯಿಲ್ಲ‘

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2018, 19:30 IST
Last Updated 25 ಫೆಬ್ರುವರಿ 2018, 19:30 IST

ಮೈಸೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರೇ ತಮ್ಮ ಗುರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರೆ ಅಚ್ಚರಿ ಪಡಬೇಕಾಗಿಲ್ಲ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಇಲ್ಲಿ ಭಾನುವಾರ ವ್ಯಂಗ್ಯವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಮಕೃಷ್ಣ ಹೆಗಡೆ ಅವರು ರಾಜಕೀಯ ಗುರು ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಆದರೆ, ರಾಜಕೀಯಕ್ಕೆ ಕರೆತಂದಿದ್ದು ಮತ್ತು ರಾಜಕಾರಣಿಯಾಗಿ ಬೆಳೆಸಿದ್ದು ಯಾರು ಎಂಬುದನ್ನು ಅವರು ಮರೆತಿದ್ದಾರೆ. ಈಗ ಹೆಗಡೆ ಹೆಸರು ಹೇಳಿರುವ ಅವರು ಇನ್ನು ಕೆಲ ದಿನ ಕಳೆದರೆ ರಾಹುಲ್ ಹೆಸರು ಹೇಳುತ್ತಾರೆ. ಹೀಗಾಗಿ, ಸಿದ್ದರಾಮಯ್ಯ ಮಾತಿಗೆ ಮಹತ್ವ ಕೊಡಬೇಕಾದ ಅಗತ್ಯವಿಲ್ಲ’ ಎಂದರು.

ಎರಡನೇ ಪಟ್ಟಿ: ಯುಗಾದಿ ಬಳಿಕ ಜೆಡಿಎಸ್‌ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಕುಮಾರಸ್ವಾಮಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.