ADVERTISEMENT

ರೈತರ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ ವಿದ್ಯುತ್ ಪೂರೈಕೆ

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಕರಲಿಂಗೇಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2018, 19:30 IST
Last Updated 2 ಮಾರ್ಚ್ 2018, 19:30 IST
ಸಾಂದರ್ಭಿಕ ಚಿತ್ರ.
ಸಾಂದರ್ಭಿಕ ಚಿತ್ರ.   

ಮಂಗಳೂರು: ರಾಜ್ಯದಾದ್ಯಂತ ರೈತರ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಲು ಆಯೋಗವು ನಿರ್ಧರಿಸಿದ್ದು, ಏಪ್ರಿಲ್‌ನಿಂದ ಇದು ಜಾರಿಗೆ ಬರಲಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಅಧ್ಯಕ್ಷ ಶಂಕರಲಿಂಗೇಗೌಡ ತಿಳಿಸಿದರು.

ನಗರದಲ್ಲಿ ಶುಕ್ರವಾರ ವಿದ್ಯುತ್‌ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕ ವಿಚಾರಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾತ್ರಿ ವೇಳೆ ವಿದ್ಯುತ್‌ ಪೂರೈಕೆ ಮಾಡುವುದರಿಂದ ರೈತರಿಗೆ ತೊಂದರೆ ಆಗುತ್ತಿದೆ ಎಂಬ ದೂರುಗಳು ಕೇಳಿ ಬಂದಿದ್ದವು. ಇದೀಗ ಹಗಲಿನಲ್ಲಿ ಸೌರ ವಿದ್ಯುತ್‌ ಉತ್ಪಾದನೆ ಹೆಚ್ಚಾಗುತ್ತಿದ್ದು, ಅದನ್ನು ಆಯಾ ಪ್ರದೇಶಗಳಲ್ಲಿಯೇ ಬಳಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಹೀಗಾಗಿ ಏಪ್ರಿಲ್‌ನಿಂದ ನಿತ್ಯ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ರೈತರಿಗೆ ವಿದ್ಯುತ್ ಒದಗಿಸಲು ನಿರ್ಧರಿಸಲಾಗಿದೆ ಎಂದರು.

ADVERTISEMENT

1 ಲಕ್ಷ ಯುನಿಟ್‌ಗಿಂತ ಹೆಚ್ಚು ವಿದ್ಯುತ್‌ ಬಳಕೆ ಮಾಡುವವರಿಗೆ ದರದಲ್ಲಿ ಸ್ವಲ್ಪ ವಿನಾಯಿತಿ ನೀಡುವಂತೆ ಕೋರಿಕೆ ಬಂದಿದೆ. ಒಂದು ವೇಳೆ ಇದನ್ನು ನಿರ್ಲಕ್ಷಿಸಿದಲ್ಲಿ, ಆ ಗ್ರಾಹಕರು ಬೇರೆ ವಿದ್ಯುತ್‌ ಖರೀದಿಗೆ ಮುಂದಾಗಬಹುದು. ಹೀಗಾಗಿ ಅಂತಹ ಗ್ರಾಹಕರನ್ನು ಹಿಡಿದಿಟ್ಟುಕೊಳ್ಳುವ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.