
ಪ್ರಜಾವಾಣಿ ವಾರ್ತೆಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ನೀಡುವ 2014ನೇ ಸಾಲಿನ ‘ಅನುಪಮಾ’ ಪ್ರಶಸ್ತಿಗೆ ಬಿ.ಟಿ. ಲಲಿತಾ ನಾಯಕ್ ಆಯ್ಕೆಯಾಗಿದ್ದಾರೆ.
ಪ್ರಶಸ್ತಿಯು ₨ 10 ಸಾವಿರ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ. 14ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಡಾ. ವಸುಂಧರಾ ಭೂಪತಿ ತಿಳಿಸಿದ್ದಾರೆ.
ಪ್ರಸಸ್ತಿ ಆಯ್ಕೆಗೆ ಪ್ರೊ.ಕೆ. ಮರುಳಸಿದ್ದಪ್ಪ, ಡಾ.ಬಿ.ಎನ್. ಸುಮಿತ್ರಾಬಾಯಿ ಮತ್ತು ಮೀನಾಕ್ಷಿ ಬಾಳಿ ಅವರ ಸಮಿತಿ ರಚಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.