ADVERTISEMENT

ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ನ್ಯಾಯಾಂಗ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2013, 19:30 IST
Last Updated 15 ಡಿಸೆಂಬರ್ 2013, 19:30 IST
ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ನ್ಯಾಯಾಂಗ ವಶಕ್ಕೆ
ಲೈಂಗಿಕ ಕಿರುಕುಳ: ಪ್ರಾಧ್ಯಾಪಕ ನ್ಯಾಯಾಂಗ ವಶಕ್ಕೆ   

ಗುಲ್ಬರ್ಗ: ಗುಲ್ಬರ್ಗ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾ­ಗದ ಸಂಶೋಧನಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸಹಾಯಕ ಪ್ರಾಧ್ಯಾಪಕ ಹಾಗೂ ಮಾರ್ಗದರ್ಶಕ ಪ್ರೊ.ದಶರಥ ನಾಯಕ ಅವರನ್ನು ಪೊಲೀಸರು ಭಾನುವಾರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.

ನ್ಯಾಯಾಧೀಶರು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ನ್ಯಾಯಾಧೀಶರ ಮನೆಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತ­ನಾಡಿದ ದಶರಥ ನಾಯಕ, ‘ನನ್ನ ಮೇಲಿನ ಆರೋಪ ಸತ್ಯಕ್ಕೆ ದೂರ­ವಾಗಿದೆ. ನಾನು ಸರ್ಕಾರಿ ನೌಕರ­ನಾದ್ದರಿಂದ ಅಮಾನತುಗೊಳಿಸಬಹುದು ಎಂಬ ಭಯದಿಂದ ನಿರೀಕ್ಷಣಾ ಜಾಮೀನು ಪಡೆಯಲು ಓಡಾಡುತ್ತಿದ್ದೆ. ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗದ ಮೇಲೆ ವಿಶ್ವಾಸವಿದ್ದು, ದೋಷಮುಕ್ತನಾಗಿ ಹೊರಬರುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.