ADVERTISEMENT

’ವಂಡರ್ ಲಾ’ಗೆ ನುಗ್ಗಿದ ಚಿರತೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 17:06 IST
Last Updated 28 ಫೆಬ್ರುವರಿ 2018, 17:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮನಗರ: ತಾಲ್ಲೂಕಿನ ಬಿಡದಿ ಬಳಿಯ ವಂಡರ್ ಲಾ ಅಮ್ಯೂಸ್‌ಮೆಂಟ್ ಪಾರ್ಕಿಗೆ ಬುಧವಾರ ಮಧ್ಯಾಹ್ನ ಚಿರತೆ ನುಗ್ಗಿದೆ.

ಪಕ್ಕದ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಿರತೆಯು ಪಾರ್ಕಿನ ಒಳಗೆ ಪ್ರವೇಶಿಸಿತು ಎನ್ನಲಾಗಿದೆ.

ಅಡಗಿ ಕುಳಿತಿರುವ ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಧಾವಿಸಿದ್ದಾರೆ. ಪಾರ್ಕಿನ ಒಳಗೆ‌ ನೂರಾರು ಸಂಖ್ಯೆಯಲ್ಲಿ ಪ್ರವಾಸಿಗರಿದ್ದು ಆತಂಕಗೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.