ADVERTISEMENT

ವಂದೇ ಮಾತರಂ ಕಡ್ಡಾಯಕ್ಕೆ ಚಿಂತನೆ

​ಪ್ರಜಾವಾಣಿ ವಾರ್ತೆ
Published 7 ಜುಲೈ 2012, 19:30 IST
Last Updated 7 ಜುಲೈ 2012, 19:30 IST

ಶಿರಸಿ: `ಶಾಲೆಗಳಲ್ಲಿ ರಾಷ್ಟ್ರಗೀತೆ, ನಾಡಗೀತೆ, ರೈತಗೀತೆಗಳಂತೆ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ವಂದೇ ಮಾತರಂ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು ಇತ್ತೀಚಿನ ದಿನಗಳಲ್ಲಿ ಪಾಲಕರು, ಸಮಾಜದ ಅನೇಕ ಹಿರಿಯರು ಬಲವಾಗಿ ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಸಮಾಲೋಚನೆ  ನಡೆಸಿ ಮುಂದಿನ ದಿನಗಳಲ್ಲಿ ನಿರ್ಣಯ ತೆಗೆದುಕೊಳ್ಳಲಿದೆ~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಇಲ್ಲಿನ ಯಲ್ಲಾಪುರ ನಾಕಾ ಸಮೀಪ 90 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಶಿರಸಿ ಶೈಕ್ಷಣಿಕ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಯ ನೂತನ ಕಟ್ಟಡವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.