ADVERTISEMENT

ವಕ್ಫ್ ಆಸ್ತಿ ಅತಿಕ್ರಮಣ: ಖಮರುಲ್ ವಜಾಕ್ಕೆ ಕಾಂತಾ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜೂನ್ 2013, 19:59 IST
Last Updated 5 ಜೂನ್ 2013, 19:59 IST

ಗುಲ್ಬರ್ಗ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿದ ವಿಶೇಷ ವರದಿಯಲ್ಲಿ ವಕ್ಫ್ ಆಸ್ತಿ ಅತಿಕ್ರಮಿಸಿದ ಆರೋಪ ಎದುರಿಸುತ್ತಿರುವ ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ ಅವರನ್ನು ಸಂಪುಟದಿಂದ ಕೈ  ಬಿಡಬೇಕು ಎಂದು ಮಾಜಿ ಸಚಿವ ಎಸ್.ಕೆ.ಕಾಂತಾ ಬುಧವಾರ ಇಲ್ಲಿ ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಕಾರ್ಯಾವಧಿ ಮುಗಿದ ಬಳಿಕ ಆಯೋಗ ವರದಿ ಸಲ್ಲಿಸಿದೆ. ಅನ್ವರ್ ಮಾಣಿಪ್ಪಾಡಿ ಅವರು ಆಯೋಗದ ಸದಸ್ಯರನ್ನು ವಿಶ್ವಾಸಕ್ಕೆ ಪಡೆಯದೆ ಎಲ್ಲೋ ಕುಳಿತು ವರದಿ ಸಿದ್ಧಪಡಿಸಿದ್ದರು ಎಂದು ಸಚಿವ ಖಮರುಲ್ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿದೆ.

ಆಯೋಗಕ್ಕೆ ಮೂರು ವರ್ಷ ಶಾಸನಾತ್ಮಕ ಅಧಿಕಾರವಿದೆ. ಅಲ್ಲದೆ ಪ್ರಸ್ತುತ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುವ ಮೊದಲೇ ಆಯೋಗದ ವರದಿಯನ್ನು ಸರ್ಕಾರ ಅಂಗೀಕರಿಸಿ, ಕ್ರಮ ಕೈಗೊಳ್ಳಲು ಆದೇಶ ಹೊರಡಿಸಿದೆ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT