ಶಿವಮೊಗ್ಗ: ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ತಾವು ಬದ್ಧ~ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಾಯಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, `ಬಿಜೆಪಿ ರಾಷ್ಟ್ರೀಯ ನಾಯಕರು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ತಮ್ಮ ಸಹಮತವಿದೆ. ನಾನು ಮೊದಲಿನಿಂದಲೂ ಸಂಘ ಪರಿವಾರ ಹಾಗೂ ಹಿರಿಯರ ಮಾರ್ಗದರ್ಶನದಂತೆ ನಡೆಯುತ್ತಿದ್ದು, ಮುಂದೆಯೂಹಾಗೆ ನಡೆದುಕೊಳ್ಳುವೆ~ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.